ನದಿಯಲ್ಲಿ ಮುಳುಗಿದ ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರೂ ನೀರುಪಾಲು - 3 drowned in river in Telangana
ಭದ್ರಾಚಲಂ (ತೆಲಂಗಾಣ) : ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನ ಗೋದಾವರಿ ನದಿಯಲ್ಲಿ ಸ್ನಾನಕ್ಕೆಂದು ಬಂದಿದ್ದ ಮೂವರು ನೀರು ಪಾಲಾಗಿದ್ದಾರೆ. ಮೃತರು ಆಂಧ್ರದ ರಾಜಮಂಡ್ರಿ ನಿವಾಸಿಗಳಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಐವರು ಭದ್ರಾಚಲಂಗೆ ಬಂದಿದ್ದರು. ಕಾರ್ಯಕ್ರಮ ಮುಗಿಸಿ ನದಿಯಲ್ಲಿ ಸ್ನಾನ ಮಾಡಲು ತೆರಳಿದಾಗಿ ಓರ್ವ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಈತನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ಮೃತಪಟ್ಟಿದ್ದಾರೆ. ಉಳಿದ ಇಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.