ದೀದಿಗೆ ಆಘಾತ: ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿ ಸಂಸದ ದಿನೇಶ್ ತ್ರಿವೇದಿ - Rajya Sabha TMC MP Dinesh Trivedi resigned from Rajya Sabha
ನವದೆಹಲಿ: ಟಿಎಂಸಿ ಸಂಸದ ದಿನೇಶ್ ತ್ರಿವೇದಿ ಅವರು ರಾಜ್ಯಸಭೆಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆಘಾತ ನೀಡಿದರು. ಇಂದು ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದೆ. ನಾವು ಇಲ್ಲಿ ಏನನ್ನೂ ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.