ಹಾಳಾದ ರಸ್ತೆ ಭುವಿಗೆ ಬರುವ ಮೊದಲೇ ಮಗುವ ಬಲಿ ಪಡೆಯಿತು! - ಮೂಲಸೌಕರ್ಯಗಳ ಕೊರತೆ
ವಿಶಾಖಪಟ್ಟಣ (ಆಂಧ್ರಪ್ರದೇಶ): ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುವ ಮಧ್ಯೆ ಮಾರ್ಗಮಧ್ಯೆ ಜನ್ಮ ನೀಡಿದ್ದ ಮಗು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣ ಬಳಿಯಿರುವ ಬುಡಕಟ್ಟು ಜನಾಂಗ ವಾಸಿಸುವ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಮಿನಿಮುಲೂರು ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಈ ಗ್ರಾಮದ ಆರು ತಿಂಗಳಿನ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಊರಿಗೆ ಸರಿಯಾದ ರಸ್ತೆಯಿಲ್ಲದ ಕಾರಣ ಌಂಬುಲೆನ್ಸ್ ಕೂಡಾ ಮಾರ್ಗ ಮಧ್ಯೆ ಸಿಲುಕಿಕೊಂಡಿತ್ತು. ಇದರಿಂದಾಗಿ ಸ್ಥಳೀಯರೇ ಡೋಲಿಯೊಂದನ್ನು ನಿರ್ಮಿಸಿ ಅದರಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಹೊಯ್ಯುವ ಪ್ರಯತ್ನ ಮಾಡಲಾಗಿತ್ತು. ಈ ವೇಳೆ ಮಾರ್ಗ ಮಧ್ಯೆ ಗರ್ಭಿಣಿ ಮಗುವಿಗೆ ಜನ್ಮನೀಡಿದ್ದರು. ಆದರೆ ದುರದೃಷ್ಟವಶಾತ್ ಮಗು ಸಾವನ್ನಪ್ಪಿದೆ ಎಂದು ಹೇಳಲಾಗಿದೆ.