ಸಚಿವ ಜಲೀಲ್ ರಾಜೀನಾಮೆಗೆ ಒತ್ತಾಯ: ಬಿಜೆಪಿ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗ
ತಿರುವನಂತಪುರಂ(ಕೇರಳ): ಉನ್ನತ ಶಿಕ್ಷಣ ಸಚಿವ ಕೆ.ಟಿ. ಜಲೀಲ್ ರಾಜೀನಾಮೆಗೆ ಒತ್ತಾಯಿಸಿ ತಿರುವನಂತಪುರಂನಲ್ಲಿ ಸಚಿವಾಲಯದ ಮುಂಭಾಗ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಚಿನ್ನ ಸಾಗಣೆ ಆರೋಪ ಹೊತ್ತಿರುವ ಸಚಿವ ಜಲೀಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಲಾಯಿತು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.