ಚಲಿಸುತ್ತಿದ್ದ ಕಾರಿಗೆ ಬೆಂಕಿ... ಕ್ಷಣಾರ್ಧದಲ್ಲಿ ಸುಟ್ಟು ಕರಕಲು - ವಿಡಿಯೋ - ಕಾರು ಬೆಂಕಿಗೆ ಆಹುತಿ
ಕರ್ನಾಲ್ (ಹರಿಯಾಣ): ಕುಟುಂಬವೊಂದು ಲೂಧಿಯಾನದಿಂದ ತೆರಳುತ್ತಿದ್ದ ವೇಳೆ ಕಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಕರ್ನಾಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಐಟಿಐ ಚೌಕ್ ಬಳಿ ನಡೆದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟುಹೋಗಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.