ನಂದಿಗ್ರಾಮದಲ್ಲಿ ದೀದಿಯ 'ವ್ಹೀಲ್ಚೇರ್ ಪಾದಯಾತ್ರೆ' - ವಿಡಿಯೋ - ನಂದಿಗ್ರಾಮ
ನಂದಿಗ್ರಾಮ (ಪಶ್ಚಿಮ ಬಂಗಾಳ): ವಿಧಾನಸಭೆ ಚುನಾವಣೆ ಹಿನ್ನೆಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಾವು ಸ್ಪರ್ಧಿಸುತ್ತಿರುವ ನಂದಿಗ್ರಾಮ ಕ್ಷೇತ್ರದಲ್ಲಿಂದು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ತಿಂಗಳ ಆರಂಭದಲ್ಲಿ ನಂದಿಗ್ರಾಮದಲ್ಲಿ ಪ್ರಚಾರ ನಡೆಸುತ್ತಿರುವ ವೇಳೆ ದೀದಿ ಗಾಯಗೊಂಡಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ವ್ಹೀಲ್ಚೇರ್ ಮೂಲಕ ನಂದಿಗ್ರಾಮದಲ್ಲಿ ರೋಡ್ ಶೋ ನಡೆಸಿದ್ದರು. ಇಂದು ಗಾಲಿಕುರ್ಚಿಯಲ್ಲಿ ಕುಳಿತೇ ಪಾದಯಾತ್ರೆ ನಡೆಸುತ್ತಿದ್ದಾರೆ.