ಕರ್ನಾಟಕ

karnataka

By

Published : Jan 10, 2020, 11:25 PM IST

ETV Bharat / videos

ಪ್ರಿಯತಮೆ ಮೇಲೆ ಅನುಮಾನ, ಬ್ಲೇಡ್​ನಿಂದ ಗಂಟಲು ಸೀಳಿದ ಪ್ರಿಯತಮ!

ತೆಲಂಗಾಣ: 25 ವರ್ಷದ ಯುವತಿಯೊಬ್ಬಳನ್ನು ತನ್ನ ಪ್ರೇಮಿಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿದ್ದು, ಯುವತಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಮೇಲೆ ಆರೋಪಿ ಕೊಲೆ ಮಾಡಿದ್ದಾನೆ. ಯುವತಿಗೆ ಬ್ಲೇಡ್‌ನಿಂದ ಹಲ್ಲೆ ಮಾಡಿ, ಅವಳ ಗಂಟಲನ್ನು ಸೀಳಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಈ ಕುರಿತು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ಕೊಲೆ ಪ್ರಕರಣ ದಾಖಲಾಗಿದೆ.

ABOUT THE AUTHOR

...view details