ಜಮೀನಿನಲ್ಲಿ ಫಸಲು ಕದ್ದ ಆರೋಪ, ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ: ವಿಡಿಯೋ
ಭೋಪಾಲ್: ಜಮೀನಿನಲ್ಲಿದ್ದ ಫಸಲನ್ನು ಮಹಿಳೆ ಕದ್ದಿದ್ದಾಳೆ ಎಂದು ಆರೋಪಿಸಿ ಆಕೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಕರಗಪುರದಲ್ಲಿ ನಡೆದಿದೆ. ಕೆಲ ಮಹಿಳೆಯರು ಸೇರಿದಂತೆ ಆರು ಮಂದಿ ಥಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.