ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ: ದೆಹಲಿಗೆ ತೆರಳಲಿರುವ ಸಿಎಂ ಬಿಎಸ್ವೈ.. ಆಗುತ್ತಾ ಮುಹೂರ್ತ ಫಿಕ್ಸ್ - ಇಂದು ಸಂಜೆ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಸಿಎಂ ದೆಹಲಿಗೆ ಪ್ರಯಾಣ
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಇಂದು ರಾತ್ರಿ ವೇಳೆಗೆ ದೆಹಲಿಗೆ ತೆರಳುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಡ್ಜ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ನಿರ್ಣಯದಂತೆ ಸಚಿವ ಸ್ಥಾನ ನೀಡಲಾಗುತ್ತದೆ. ವರಿಷ್ಠರು ನಿರ್ಣಯ ಕೈಗೊಂಡರೆ ಎರಡ್ಮೂರು ದಿನಗಳಲ್ಲಿ ಸಚಿವ ವಿಸ್ತರಣೆ ಮಾಡಲಾಗುವುದು. ಮಾಜಿ ಶಾಸಕ ಹೆಚ್.ವಿಶ್ಚನಾಥ್ರ 17 ಜನರಿಗೆ ಸಚಿವ ಸ್ಥಾನ ಹೇಳಿಕೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೋ ಹೇಳಿದಂತೆ ಸಚಿವ ಸ್ಥಾನ ನೀಡಲು ಬರುವುದಿಲ್ಲ. ಪಕ್ಷದ ವರಿಷ್ಠರ ತೀರ್ಮಾನದಂತೆ ಸಚಿವ ಸ್ಥಾನ ನೀಡಲಾಗುವುದು ಎಂದರು.
Last Updated : Jan 13, 2020, 3:21 PM IST