ರಥ ಸಪ್ತಮಿ ಪ್ರಯುಕ್ತ ಚಾಮರಾಜನಗರದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ - ಸಾಮೂಹಿಕ 108 ಸೂರ್ಯ ನಮಸ್ಕಾರ
ರಥ ಸಪ್ತಮಿ ಪ್ರಯುಕ್ತ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವತಿಯಿಂದ ನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಸಾಮೂಹಿಕ 108 ಸೂರ್ಯ ನಮಸ್ಕಾರ ನಡೆಯಿತು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರಾದಿಯಾಗಿ ವಿವಿಧ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.