ಪ್ರತಿಭಟಿಸಲು ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ತೆರಳಿದ ಕೋಟೆನಾಡಿನ ರೈತರು
ಚಿತ್ರದುರ್ಗ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ಕೋಟೆನಾಡಿನ ನಾರಾರು ರೈತರು ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕಮ್ಯುನಿಸ್ಟ್ ಸಂಘಟನೆಗಳು ಸೇರಿದಂತೆ ಹಲವು ರೈತ ಸಂಘಟನೆಗಳ ಕಾರ್ಯಕರ್ತರು ಕೃಷಿ ಕಾನೂನುಗಳ ಜೊತೆ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆಯ ವಿರುದ್ಧವೂ ಪ್ರತಿಭಟಿಸಲಿದ್ದು, ಟ್ರ್ಯಾಕ್ಟರ್ ರ‍್ಯಾಲಿಗೆ ಸಾಥ್ ನೀಡಲಿದ್ದಾರೆ.