ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಬಂಧನ ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ - ಕಲಬುರಗಿ ಪ್ರತಿಭಟನೆ ಸುದ್ದಿ
ಕಲಬುರಗಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ಅಕ್ಷರ ದಾಸೋಹ ನೌಕರರ ಸಂಘದ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಬಂಧನ ಖಂಡಿಸಿ ಕಲಬುರಗಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಂಧನಕ್ಕೊಳಗಾಗಿರುವ ವರಲಕ್ಷ್ಮಿಯವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.