ವೀರ್ ಸಾವರ್ಕರ್ಗೆ ಭಾರತ ರತ್ನ... ಮನಮೋಹನ್ ಸಿಂಗ್ ಹೇಳಿದ್ರು ಈ ಮಾತು! - ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಮುಂಬೈ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿದ್ದಾರೆ. ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಕಾಂಗ್ರೆಸ್ ವಿರೋಧವಿಲ್ಲ. ಆದರೆ ನಮ್ಮ ಪ್ರಶ್ನೆ ಸಾವರ್ಕರ್ ಪೋಷಿಸಿರುವ ಹಿಂದುತ್ವ ಸಿದ್ಧಾಂತದ ಬಗ್ಗೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ವಿಧಾನಸಭೆಗಾಗಿ ರಿಲೀಸ್ ಮಾಡಿರುವ ಪ್ರಣಾಳಿಕೆಯಲ್ಲಿ ವೀರ್ ಸಾವರ್ಕರ್ಗೆ ಭಾರತರತ್ನ ನೀಡುವುದಾಗಿ ಘೋಷಣೆ ಮಾಡಿದೆ.