ರಾಷ್ಟ್ರೀಯ ಹೆದ್ದಾರಿ ತಡೆ: ಯಾದಗಿರಿ ಜಿಲ್ಲೆಯಲ್ಲಿಯೂ ರೈತ ಸಂಘಟನೆಗಳು ಸಾಥ್ - ಯಾದಗಿರಿ
ಯಾದಗಿರಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಇಂದು ರಾಜ್ಯದ ಹಲವೆಡೆ ರೈತ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರೀಯ ಹೆದ್ದಾರಿ ತಡೆಗೆ ಯಾದಗಿರಿ ಜಿಲ್ಲೆಯಲ್ಲೂ ಕೂಡ ವಿವಿಧ ರೈತ ಸಂಘಟನೆಗಳು ಸಾಥ್ ನೀಡಿವೆ. ಶಹಪುರ ನಗರದ ತಹಶೀಲ್ದಾರ ಕಚೇರಿ ಬಳಿಯ ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ (150A) ಬಂದ್ ಮಾಡಿ ರೈತ ಪರ ಸಂಘಟನೆಗಳ ವತಿಯಿಂದ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಯಿತು. ಕೂಡಲೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸುವದಾಗಿ ಮುಖಂಡರು ಸರ್ಕಾರಕ್ಕೆ ಎಚ್ವರಿಕೆ ನೀಡಿದರು.