ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಹೊರಟವರ ಕ್ಯಾಮೆರಾದಲ್ಲಿ ಚಿರತೆ ಸೆರೆ : ವಿಡಿಯೋ - Bhadra Sanctuary Safari
ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯದ ಮುತ್ತೋಡಿಯಲ್ಲಿ ಸಫಾರಿಗೆ ತೆರಳಿದ ವೇಳೆ ಚಿರತೆಯೊಂದು ಪ್ರವಾಸಿಗರ ಕಣ್ಣಿಗೆ ಬಿದ್ದಿದೆ. ಭದ್ರಾ ವನ್ಯಜೀವಿ ರಕ್ಷಿತಾರಣ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿರತೆ, ಹುಲಿ, ಆನೆ, ಜಿಂಕೆ ಸೇರಿ ಅನೇಕ ಪ್ರಾಣಿಗಳಿವೆ. ಇಲ್ಲಿನ ಪ್ರಾಣಿಗಳನ್ನ ನೋಡಿ ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಾಗಿ ಆಗಮಿಸುತ್ತಿದ್ದಾರೆ. ಇದೀಗ ಚಿರತೆಯೊಂದು ರಸ್ತೆ ಬದಿಯಲ್ಲಿ ಓಡಾಡುತ್ತಿರುವ ದೃಶ್ಯ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ.