ಮೈಸೂರಿನಲ್ಲಿ ಲಾಕ್ಡೌನ್ಗೆ ಸಂಪೂರ್ಣ ಬೆಂಬಲ: ಬಿಕೋ ಎನ್ನುತ್ತಿವೆ ರಸ್ತೆಗಳು - ಮೈಸೂರಿನಲ್ಲಿ ಲಾಕ್ಡೌನ್
ಮೈಸೂರು: ರಾಜ್ಯ ಸರ್ಕಾರ ಈಗಾಗಲೇ ಭಾನುವಾರದಂದು ಸಂಪೂರ್ಣ ಲಾಕ್ಡೌನ್ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಅಗತ್ಯ ವಸ್ತುಗಳನ್ನು ಬಿಟ್ಟು ಇನ್ನಿತರೆ ವಹಿವಾಟುಗಳಿಗೆ ಸಂಪೂರ್ಣ ನಿಷೇಧ ಮಾಡಿದ್ದರಿಂದ ರಸ್ತೆಗಳು ಬಿಕೋ ಎನ್ನುತ್ತಿವೆ. ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡುವ ಮೂಲಕ ಸಂಪೂರ್ಣ ಬೆಂಬಲ ನೀಡಿದ್ದಾರೆ. ದೇವರಾಜ ಮಾರುಕಟ್ಟೆಯಲ್ಲಿ ಹಣ್ಣು, ಹೂವು, ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಮಳಿಗೆಗಳನ್ನು ತೆರೆಯಲು ಮಾಲೀಕರು ಮುಂದೆ ಬಂದಿಲ್ಲ. ಆದರೆ ಮಾಂಸದಂಗಡಿಗಳ ಮುಂದೆ ಗ್ರಾಹಕರು ಮುಗಿಬಿದ್ದಿದ್ದರು.