ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ₹15 ಕೋಟಿ ವಂಚಿಸಿ ವ್ಯಕ್ತಿ ಪರಾರಿ - chitfund
ಚಿಕ್ಕಬಳ್ಳಾಪುರ: ಎಲ್ಲಿಯ ತನಕ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರಿಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ ಐಎಂಎ ಪ್ರಕರಣ. ಇಂಥ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಇದೇ ಮಾದರಿಯ ಮತ್ತೊಂದು ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.