ಕೊಪ್ಪಳದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸ್ತಿದ್ದ ನೂರಾರು ರೈತರ ಬಂಧನ.. - Koppal
ಕೊಪ್ಪಳ: ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು. ರೈತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ಯರು ಕೊಪ್ಪಳ ತಾಲೂಕಿ ಹಿಟ್ನಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.