ರಾಗಿಣಿ ಕಸ್ಟಡಿ ಅಂತ್ಯ: ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಮತ್ತೆ ವಶಕ್ಕೆ ಪಡೆಯಲು ಸಿಸಿಬಿ ಸಿದ್ಧತೆ - ರಾಗಿಣಿ ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ರಾಗಿಣಿಯ ಸಿಸಿಬಿ ಕಸ್ಟಡಿ ಅಂತ್ಯಗೊಂಡಿದ್ದು, ಇಂದು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಸಿಸಿಬಿ ನಿರ್ಧಾರ ಮಾಡಿದೆ. ಮಹಿಳಾ ಸಾಂತ್ವನ ಕೇಂದ್ರದಿಂದಲೇ ವಿಡಿಯೋ ಕಾನ್ಫರೆನ್ಸ್ ಮುಖಾಂತರ 1ನೇ ಎಸಿಎಂಎಂ ಮ್ಯಾಜಿಸ್ಟ್ರೇಟ್ ಮುಂದೆ ರಾಗಿಣಿಯನ್ನು ಹಾಜರುಪಡಿಸಿ ಮತ್ತೆ ಸಿಸಿಬಿ ಕಸ್ಟಡಿಗೆ ಕೇಳಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಎನ್ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಕೂಡ ನಡೆಯಲಿದೆ. ಒಟ್ಟಾರೆ ಸಿಸಿಬಿ ಕಚೇರಿಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಸ್ಥಳದ ವಾಸ್ತವ ಚಿತ್ರಣ ಇಲ್ಲಿದೆ ನೋಡಿ.