ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆ: ಕಾದು ಕೆಂಡವಾಗಿದ್ದ ಭೂಮಿಗೆ ತಂಪೆರೆದ ಮಳೆರಾಯ
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಹುಬ್ಬಳ್ಳಿ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಇಷ್ಟು ದಿನ ಬಿಸಿಲಿನಿಂದ ಕಂಗೆಟ್ಟಿದ್ದ ಹುಬ್ಬಳ್ಳಿ ಜನತೆಗೆ ಇಂದು ತಂಪು ಹವಾಮಾನದ ಅನುಭವ ಆಗಿದೆ.