'ಮಹಾದಾಯಿ ಯೋಜನೆಗೆ ಉಪರಾಷ್ಟ್ರಪತಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ' - wise-president-positive-reaction-to-mahdayi-issue
ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ಕುರಿತಂತೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಹದಾಯಿ ಹೋರಾಟಗಾರ ವೀರೇಶ ಸೊಬರದಮಠ ಹೇಳಿದರು. ನಗರದಲ್ಲಿ ಉಪರಾಷ್ಟ್ರಪತಿಗಳನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹಾದಾಯಿ ಯೋಜನೆ ಜಾರಿ ಬಗ್ಗೆ 20 ನಿಮಿಷಗಳ ಕಾಲ ಅವರೊಂದಿಗೆ ಚರ್ಚೆ ಆಗಿದೆ. ನ್ಯಾಯಾಧೀಕರಣ ನೀರಿನ ಹಂಚಿಕೆ ವಿಚಾರಕ್ಕೆ ಶೀಘ್ರದಲ್ಲೇ ಗೆಜೆಟ್ ನೋಟಿಫಿಕೇಷನ್ ಹೊರಡಿಸಲು ಕೇಂದ್ರಕ್ಕೆ ಸೂಚನೆ ನೀಡಬೇಕು. ರೈತರ ಬೆಳೆದ ಬೆಳೆಗಳಿಗೆ ನಿರಂತರ ಖರೀದಿ ಕೇಂದ್ರ ತೆರೆಯಬೇಕು. ನೆರೆಪೀಡಿತ ಪ್ರದೇಶದಲ್ಲಿ ಹಾನಿಯಾಗಿದ್ದು ಜನರಿಗೆ ಸೂಕ್ತ ಪರಿಹಾರ ನೀಡಲು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದ್ದೇವೆ. ನಮ್ಮ ಮನವಿಗೆ ಉಪರಾಷ್ಟ್ರಪತಿ ಸ್ಪಂದಿಸಿದ್ದಾರೆ ಎಂದರು.