ಮಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಢೀರ್ ಬೆಂಕಿ.. ಚಾಲಕಿ ಪಾರು: VIDEO - Car caught fire in mangaluru
ಮಂಗಳೂರು: ಇಲ್ಲಿನ ಶಕ್ತಿನಗರದಲ್ಲಿ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಶಕ್ತಿನಗರದಲ್ಲಿ ಮಹಿಳೆಯೊಬ್ಬರು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದೆ. ಗಾಬರಿಗೊಂಡ ಮಹಿಳೆ ಕೂಡಲೇ ಕಾರಿನಿಂದ ಇಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯಿಂದ ಕಾರು ಸಂಪೂರ್ಣ ಹಾನಿಗೊಳಗಾಗಿದ್ದು, ಪಾಂಡೇಶ್ವರ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
Last Updated : Feb 3, 2023, 8:21 PM IST