ಶಾಲೆಗೆ ಮರಳುತ್ತಿರುವ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ನೀಡಿ: ಸೋನಿಯಾ ಗಾಂಧಿ - ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ
ಮಹಾಮಾರಿ ಕೊರೊನಾ ವೈರಸ್ನಿಂದಾಗಿ ದೇಶದಲ್ಲಿ ಹೆಚ್ಚಿನ ಮಕ್ಕಳು ಬಾಧಿತರಾಗಿದ್ದು, ಇದೀಗ ಶಾಲೆಗಳು ಪುನಾರಂಭವಾಗಿವೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರದ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಗಮನ ಸೆಳೆದರು. ಲೋಕಸಭೆಯಲ್ಲಿ ಮಾತನಾಡಿರುವ ಅವರು, ದೇಶದಲ್ಲಿ ಶಾಲೆಗಳು ಬಂದ್ ಆಗುತ್ತಿದ್ದಂತೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯೂ ಸ್ಥಗಿತಗೊಂಡಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಯಾವುದೇ ರೀತಿಯ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ, ಅನೇಕ ಕುಟುಂಬಗಳು ತೀವ್ರ ತೊಂದರೆ ಎದುರಿಸಿವೆ. ಇಂತಹ ಸಂಕಷ್ಟ ದೇಶದಲ್ಲಿ ಹಿಂದೆಂದೂ ಉಂಟಾಗಿರಲಿಲ್ಲ. ಇದೀಗ ಶಾಲೆಗಳಿಗೆ ಮರಳುತ್ತಿರುವ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಅಗತ್ಯವಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.
Last Updated : Feb 3, 2023, 8:20 PM IST