ಕರ್ನಾಟಕ

karnataka

ETV Bharat / videos

ತವರು ಜಿಲ್ಲೆಗೆ ಬಿಗ್​ಬಾಸ್​ ಶೈನ್ ಶೆಟ್ಟಿ ಆಗಮನ... ಅಭಿಮಾನಿಗಳಿಂದ ಅದ್ಧೂರಿ ಮೆರವಣಿಗೆ - Bigg Boss Season 7 Winner Shine Shetty

By

Published : Feb 18, 2020, 10:31 PM IST

​ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದರು. ಅಭಿಮಾನಿಗಳು ಅವರನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಗರದ ಪ್ರಮುಖ ರಸ್ತೆಗಳಲ್ಲಿ ಅವರ ಮೆರವಣಿಗೆ ಸಾಗಿತು. ಕಾಲೇಜು ವಿದ್ಯಾರ್ಥಿಗಳು, ಕಲಾತಂಡಗಳು, ಚಂಡೆ ಕೀಲುಕುದುರೆ ಮತ್ತಿತರ ಸಾಂಸ್ಕೃತಿಕ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಶೈನ್ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಆತ್ರಾಡಿಯವರು. ಶೈನ್ ತಂದೆ ಕುಂದಾಪುರದ ಆರ್ಡಿಯವರು. ಉಡುಪಿಯಲ್ಲಿ ಶಿಕ್ಷಣವನ್ನು ಮುಗಿಸಿ ಬೆಳ್ಳಿತೆರೆಗೆ ಮನಸೋತು ಬೆಂಗಳೂರು ಸೇರಿದ್ದ ಶೈನ್ ಚಿತ್ರರಂಗದಲ್ಲಿ ಹಿನ್ನಡೆಯಾದರೂ ಸಣ್ಣ ಹೋಟೆಲ್ ಉದ್ಯಮ ಆರಂಭಿಸಿದರು. ಇದೀಗ ಬಿಗ್​ಬಾಸ್ ವಿನ್ನರ್ ಆಗಿ ಶೈನ್ ಮತ್ತೆ ಮಿಂಚುತ್ತಿದ್ದಾರೆ.

ABOUT THE AUTHOR

...view details