18 ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ: ಸಲೀಂ ಅಹಮದ್ - 18 ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಬದಲಾವಣೆ
ತುಮಕೂರು: 18 ಜಿಲ್ಲೆಗಳ ಕಾಂಗ್ರೆಸ್ ಕಮಿಟಿಯ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬದಲಾವಣೆ ಮಾಡಲಾಗುವುದು. ನಾಲ್ಕು ವರ್ಷಕ್ಕಿಂತ ಹೆಚ್ಚು ಅವಧಿವರೆಗೆ ಜಿಲ್ಲಾಧ್ಯಕ್ಷರಾಗಿದ್ದವರ ಬದಲಾವಣೆ ಅನಿವಾರ್ಯ. ಈ ಮೂಲಕ ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಸಂಘಟಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು. ಇದರ ಜೊತೆಗೆ, ರಾಜ್ಯದಲ್ಲಿ ವಿಜಯೇಂದ್ರ ಡಿಫ್ಯಾಕ್ಟ್ ಮುಖ್ಯಮಂತ್ರಿಯಾಗಿದ್ದಾರೆ, ಅಪಾರ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅವರು ಟೀಕಿಸಿದರು.