ಚಿಕ್ಕಮಗಳೂರು ಜಿಲ್ಲಾ ಉತ್ಸವ: ತಮಟೆ ಸದ್ದಿಗೆ ಭರ್ಜರಿ ಸ್ಟೆಪ್ಸ್ ಹಾಕಿದ ಸಚಿವ ಸಿ.ಟಿ.ರವಿ! - ಚಿಕ್ಕಮಗಳೂರು ಜಿಲ್ಲಾ ಉತ್ಸವ
20 ವರ್ಷಗಳ ನಂತರ ಚಿಕ್ಕಮಗಳೂರು ಜಿಲ್ಲಾ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ಇಂದು ಎರಡನೇಯ ದಿನಕ್ಕೆ ಕಾಲಿಟ್ಟಿದೆ. ಜಿಲ್ಲಾ ಆಟದ ಮೈದಾನದಲ್ಲಿ ಜಾನಪದ ಉತ್ಸವ ನಡೆದಿದ್ದು, ಉತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸಂಭ್ರಮಿಸಿದ್ದಾರೆ. ಕಾರ್ಯಕ್ರಮದಲ್ಲಿ ತಮಟೆ ಹಾಗೂ ಇತರೆ ವಾದ್ಯಗಳ ಶಬ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಸಖತ್ ಸ್ಟೆಪ್ಸ್ ಹಾಕಿದ್ದಾರೆ.