ಕಲಬುರಗಿ: ಕೋವಿಡ್ ಲಸಿಕೆ ವಿತರಣೆಗೆ ಚಾಲನೆ
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಸಾಮೂಹಿಕ ಉದ್ಘಾಟನೆ ನೇರವೇರಿಸಿದ ನಂತರ ಇಲ್ಲಿನ ಜಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿದೆ. ಜಿಮ್ಸ್ ಆಸ್ಪತ್ರೆಯ ಡಿ. ಗ್ರೂಪ್ ನೌಕರ ಅನಂತರಾಜ್ ಎಂಬುವರಿಗೆ ಮೊದಲು ವ್ಯಾಕ್ಸಿನ್ ನೀಡಲಾಯಿತು. ಈ ವೇಳೆ ಡಿಸಿ ವಿ.ವಿ.ಜ್ಯೋತ್ಸ್ನಾ, ಸಂಸದ ಉಮೇಶ್ ಜಾಧವ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ, ಶಾಸಕ ಬಸವರಾಜ ಮತ್ತಿಮೋಡ, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ ಮತ್ತಿತರರ ಉಪಸ್ಥಿತರಿದ್ದರು. ಜೊತೆಗೆ ಜಿಮ್ಸ್ ಮೆಡಿಕಲ್ ಕಾಲೇಜ್, ಅಫಜಲಪೂರ, ಆಳಂದ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ, ಸೇಡಂ ತಾಲೂಕ್ ಆಸ್ಪತ್ರೆಗಳು ಹಾಗೂ ಅಫಜಲಪೂರ ತಾಲೂಕಿನ ಗೊಬ್ಬುರ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ.