ದಲಿತರ ಮೇಲೆ ಹಲ್ಲೆ ಪ್ರಕರಣ: ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ - ಕೊಪ್ಪಳ ಪ್ರತಿಭಟನೆ ಸುದ್ದಿ
ಕೊಪ್ಪಳ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿದವರ ಮೇಲೆ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಕಲ್ಲು ಎಸೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.