ನಂಜನಗೂಡಿನಲ್ಲಿ 'ಕಪಿಲಾ ಆರತಿ' ಕಣ್ತುಂಬಿಕೊಂಡ ಭಕ್ತ ಸಮೂಹ - devotees celebrated kapila aarthi
ಮೈಸೂರು: ನಂಜನಗೂಡಿನಲ್ಲಿನ ಕಪಿಲಾ ನದಿಯ ಸ್ನಾನ ಘಟ್ಟದಲ್ಲಿ ವಿಜೃಂಭಣೆಯಿಂದ ಲಕ್ಷ ದೀಪೋತ್ಸವ ನಡೆಯಿತು. ಸಾವಿರಾರು ಭಕ್ತರು ಕಪಿಲಾ ಆರತಿ ಮಾಡಿ ಪೂಜೆ ಸಲ್ಲಿಸಿದರು. ನಂಜನಗೂಡು ಯುವ ಬ್ರಿಗೇಡ್ ವತಿಯಿಂದ ಏರ್ಪಡಿಸಿದ್ದ ಕಪಿಲಾ ಆರತಿಯನ್ನು ಮಂತ್ರಾಲಯದ ಸುಭುದೇಂದ್ರ ಸ್ವಾಮೀಜಿ ಹಾಗೂ ರಾಮಕೃಷ್ಣ ಮಠದ ಸ್ವಾಮೀಜಿ ನದಿಗೆ ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಕಳೆದ ನಾಲ್ಕು ವರ್ಷಗಳಿಂದ ಯುವ ಬ್ರಿಗೇಡ್ ಕಪಿಲಾ ಆರತಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ.