ಆಂಧ್ರದಿಂದ ಬರುವವರಿಗೆ ಪ್ರವೇಶವಿಲ್ಲ: ಸಚಿವ ಮಾಧುಸ್ವಾಮಿ - ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿಕೆ
ಕೊರೊನ ಸೋಂಕು ಹರಡದಂತೆ ಜಿಲ್ಲಾಡಳಿತ ಸರ್ವ ಪ್ರಯತ್ನ ನಡೆಸುತ್ತಿದ್ದು, ನೆರೆಯ ಆಂಧ್ರ ಪ್ರದೇಶದಿಂದ ಬರುವ ವಾಹನಗಳಿಗೆ ನಿಷೇಧ ಹೇರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರಕು ವಾಹನಗಳನ್ನು ಹೊರತು ಪಡಿಸಿ, ಉಳಿದಂತೆ ಯಾವುದೇ ವಾಹನಗಳಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.