ಮಾ. 14-15ರಂದು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ - ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಮಾ. 14 ಮತ್ತು 15ರಂದು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿದೆ ಎಂದು ಗದಗದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶರಣು ಗೋಗೇರಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಗದಗದ ಕನ್ನಡ ಸಾಹಿತ್ಯ ಭವನದಲ್ಲಿ ಸಮ್ಮೇಳನ ನಡೆಯಲಿದ್ದು, ಗದಗದ ನಿವೃತ್ತ ಪ್ರಾಚಾರ್ಯರಾದ ರವೀಂದ್ರ ಕೊಪ್ಪರ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.