ಮೀಸಲಾತಿ ಘೋಷಣೆ ಮಾಡದಿದ್ದರೆ ವಿಧಾನಸೌಧ ಮುತ್ತಿಗೆ: ವಿಜಯಾನಂದ ಕಾಶಪ್ಪನವರ - ಪಂಚಮಸಾಲಿ ಸಮುದಾಯ ಸಮಾವೇಶ
ತುಮಕೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ಕುರಿತಂತೆ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ನಿರಂತರವಾಗಿ ಯತ್ನ ನಡೆಯುತ್ತಿದೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ. ಮೀಸಲಾತಿ ಪಡೆದೇ ತಿರುತ್ತೇವೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಗುಡುಗಿದ್ದಾರೆ. ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಈಗಾಗಲೇ ಸರ್ಕಾರದ ಇಬ್ಬರು ಸಚಿವರು ಪಾದಯಾತ್ರೆ ಸಂದರ್ಭದಲ್ಲಿ ಬಂದು ಮುಖ್ಯಮಂತ್ರಿಗಳೊಂದಿಗೆ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ್ದಾರೆ. ಸಮಾವೇಶ ಆಯೋಜನೆ ಮಾಡುವುದರ ಪೂರ್ವದಲ್ಲಿ ಸ್ಪಂದಿಸದಿದ್ದರೆ ವಿಧಾನಸೌಧ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲದೆ ನೋಡಿ.