ಬಿಜೆಪಿ ಸರ್ಕಾರ ಬರಲು ದೋಸ್ತಿಗಳ ಕಚ್ಚಾಟವೇ ಕಾರಣ,ನಾನಲ್ಲ: ಶ್ರೀನಿವಾಸ್ ಪ್ರಸಾದ್ - mysure Shrinivas prasad pressmeet
ಮೈಸೂರು: ರಾಜ್ಯದಲ್ಲಿ ದೋಸ್ತಿ ಸರ್ಕಾರದ ಕಚ್ಚಾಟವೇ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣವೇ ಹೊರತು ನಾನಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ. ನಿನ್ನೆ ಅಧಿಕೃತವಾಗಿ ಬಿಜೆಪಿ ಸೇರಿದ ಹೆಚ್.ವಿಶ್ವನಾಥ್, ಬಿಜೆಪಿ ಸರ್ಕಾರ ಬರಲು ವಿ.ಶ್ರೀನಿವಾಸ್ ಪ್ರಸಾದ್ ಕಾರಣ ಎಂದು ಹೇಳಿದ್ದರು. ಉಪ ಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ, ಎಲ್ಲರೂ ಮಂತ್ರಿಗಳಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.