ಹೊರ ರಾಜ್ಯದ ಜನರ ಮೇಲೆ ತುಮಕೂರು ಜಿಲ್ಲಾಡಳಿತ ತೀವ್ರ ನಿಗಾ
ಹೊರ ಜಿಲ್ಲೆ ಮತ್ತು ಹೊರ ರಾಜ್ಯದಿಂದ ಬರುತ್ತಿರುವವರ ಮೇಲೆ ತುಮಕೂರು ಜಿಲ್ಲಾಡಳಿತ ತೀವ್ರ ನಿಗಾ ಇರಿಸಿದೆ.ಹೊರಗಿನಿಂದ ಬಂದವರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ಗೆ ಒಳಪಡಿಸಿ, ಪರೀಕ್ಷಿಸಲು ತುಮಕೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ತಾಲೂಕುವಾರು ಪ್ರತ್ಯೇಕ ಘಟಕಗಳನ್ನು ತೆರೆಯಲಾಗಿದೆ. ದಿನದ 24 ಗಂಟೆಯೂ ವೈದ್ಯಕೀಯ ಸಿಬ್ಬಂದಿ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.