ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಲ್ಲಿ ಜೆಡಿಎಸ್ ಪ್ರತಿಭಟನೆ - Citizenship Act news
ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ಜೆಡಿಎಸ್ ಘಟಕದಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಹಾಗೂ ಶಾಸಕ ಸಾ.ರಾ.ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮುನ್ನೆಚ್ಚರಿಕಾ ಕ್ರಮವಾಗಿ ನಗರ ಕಮಿಷನರ್ ಕೆಲವು ಷರತ್ತುಗಳನ್ನು ಹಾಕಿ ಪ್ರತಿಭಟನೆಗೆ ಅವಕಾಶ ನೀಡಿದ್ದರ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಬಳಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.