ಹಾವೇರಿ: ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಜನತೆ - ಹಾವೇರಿ ಚಿರತೆ ಸೆರೆ
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದ ಸುತ್ತಮುತ್ತಲಿನ ರೈತರಿಗೆ ಪ್ರತ್ಯಕ್ಷವಾಗಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತಲಿನ ರೈತರ ಜಮೀನಿನಲ್ಲಿ ಚಿರತೆ ಓಡಾಡಿಕೊಂಡಿತ್ತು. ಕೊನೆಗೂ ಇಂದು ಎರಡು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದ್ದು, ಅರಳೀಕಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನಿಶ್ಚಿಂತೆಯಿಂದ ಉಸಿರು ಬಿಟ್ಟಿದ್ದಾರೆ. ಸೆರೆಯಾಗಿರುವ ಚಿರತೆಯನ್ನು ಅರಣ್ಯಕ್ಕೆ ಬಿಡಲಾಗುತ್ತಿದೆ.