ಪಾಟೀಲ್ ಪುಟ್ಟಪ್ಪ ಆರೋಗ್ಯ ವಿಚಾರಿಸಿದ ಡಿಸಿ ದೀಪಾ ಚೋಳನ್ - ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಅನಾರೋಗ್ಯ
ಹಿರಿಯ ಸಾಹಿತಿ, ಹಿರಿಯ ಪತ್ರಕರ್ತ, ನಾಡೋಜ ಪಾಟೀಲ್ ಪುಟ್ಟಪ್ಪ ಅನಾರೋಗ್ಯ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಆರೋಗ್ಯ ವಿಚಾರಿಸಿದರು. ಕಳೆದ ಹಲವು ದಿನಗಳಿಂದ ಅನಾರೋಗ್ಯ ಹಿನ್ನೆಲೆ ಕಿಮ್ಸ್ನಲ್ಲಿ ದಾಖಲಾಗಿರುವ ಪಾಪು ಅವರನ್ನು ಜಿಲ್ಲಾಧಿಕಾರಿ ದೀಪಾ ಚೋಳನ್, ವಾ.ಕ.ರಾ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಸೇರಿದಂತೆ ಹಲವರು ಭೇಟಿ ಮಾಡಿದ್ರು. ಪಾಪು ಆರೋಗ್ಯ ಕುರಿತಂತೆ ಕಿಮ್ಸ್ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.