ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಇಳಿಕೆ: ರಾಜ್ಯದ ಜನ ಏನಂತಾರೆ? - ಸಿ.ಎಂ ಬಸವರಾಜ್ ಬೊಮ್ಮಾಯಿ ಟ್ವೀಟ್
ರಾಜ್ಯದ ಜನರ ಮೇಲಿನ ಹೊರೆ ಕಡಿಮೆ ಮಾಡುವ ದೃಷ್ಟಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರವನ್ನು ಕಡಿಮೆ ಮಾಡಲಾಗಿದೆ ಎಂದು ಟ್ವೀಟ್ ಮೂಲಕ ನಿನ್ನೆ ರಾತ್ರಿ ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದರು. ಆದರೆ, ಈ ಕುರಿತು 'ಈಟಿವಿ ಭಾರತ'ಕ್ಕೆ ಪ್ರತಿಕ್ರಿಯೆ ನೀಡಿದ ಜನಸಾಮಾನ್ಯರು, ದರ ಹೆಚ್ಚಿಸುವಾಗ ಏಕಾಏಕಿ ಕಾರ್ಯರೂಪಕ್ಕೆ ತರುತ್ತಾರೆ. ಆದರೆ, ಬೆಲೆ ಇಳಿಕೆ ಯಾಕೆ ಕೂಡಲೇ ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಇಲ್ಲಿವಯರೆಗೆ ಬೆಲೆ ಏರಿಸಿ, ಈಗ ಅಲ್ಪ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದೆ ಎಂದಿದ್ದಾರೆ.