ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಇಳಿಕೆ ಜಾರಿ: ಹೀಗಂದ್ರು ರಾಜ್ಯದ ಜನ.. - ಪೆಟ್ರೋಲ್-ಡೀಸೆಲ್ ಅಬಕಾರಿ ಸುಂಕ ಇಳಿಕೆ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೈಲದ ಮೇಲಿನ ಅಬಕಾರಿ ಸುಂಕ ಹಾಗು ಮಾರಾಟ ತೆರಿಗೆಯನ್ನು ಕಡಿಮೆ ಮಾಡಿವೆ. ರಾಜ್ಯದಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಜಾರಿಯೂ ಆಗಿದೆ. ಈ ಬಗ್ಗೆ ಈಟಿವಿ ಭಾರತ್ ನಗರದ ಪೆಟ್ರೋಲ್ ಬಂಕ್ಗಳಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿತು. ಈ ವೇಳೆ ಕೆಲವರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ಬಿಲ್ ದರವನ್ನು ಕಡಿಮೆ ಮಾಡಬೇಕು ಎಂದು ಕೇಳಿಕೊಂಡರು. ಕೋವಿಡ್ ಮೊದಲ ಮತ್ತು 2ನೇ ಅಲೆಯಿಂದ ಸಾಮಾನ್ಯ ಜನರ ಜೀವನ ತತ್ತರಿಸಿ ಹೋಗಿದೆ. ಹೀಗಾಗಿ, ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳದಿಂದ ಜೀವನ ದುಸ್ತರವಾಗಿದೆ ಎಂದು ಅಳಲು ತೋಡಿಕೊಂಡರು.