ಪಿಎಲ್ಡಿ ಬ್ಯಾಂಕ್ ಚುನಾವಣೆ: ಅಧ್ಯಕ್ಷ ಹಾಗೂ ಉಪಾಧ್ಯಕ್ಷನ ಅವಿರೋಧ ಆಯ್ಕೆ - ಕಲಬುರಗಿ ಪಿಎಲ್ಡಿ ಬ್ಯಾಂಕ್ ಚುನಾವಣೆ
ಕಲಬುರಗಿ: ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ - ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸೀತಿಕಂಠ ತಡಕಲ್ ಅವರು ಅಧ್ಯಕ್ಷರಾಗಿ ಹಾಗೂ ಜಗದೀಶ್ ವಳಕೇರಿ ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಗಿದೆ. ಫೆ.08 ರಂದು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ನಿರ್ದೇಶಕರನ್ನು ಅವಿರೋಧ ಆಯ್ಕೆ ಮಾಡಲಾಗಿತ್ತು. ಚುನಾವಣೆಯಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬೆಂಬಲಿಗರು ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ರು.