ಕೊರೊನಾ ವೈರಸ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ: ಸಚಿವ ಡಾ ಕೆ ಸುಧಾಕರ್ - Precautionary measures have been taken regarding coronavirus
ಬೆಂಗಳೂರು: ನಾವು ಈಗಾಗಲೇ ಕೊರೊನಾ ವೈರಸ್ ಬಗ್ಗೆ ಮುನ್ನೆಚ್ಚರಿಕಾ ಕ್ರಮ ಹಾಗೂ ಮಾರ್ಗಸೂಚಿಗಳನ್ನು ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ಜನವರಿ 20ರಿಂದಲೇ ಕೊರೊನಾ ತಡೆಗೆ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ಬೇರೆ ರಾಜ್ಯಗಳಿಗಿಂತ ಮೊದಲೇ ನಾವು ಎಚ್ಚೆತ್ತು ಮುಂಜಾಗ್ರತಾ ಕ್ರಮಕೈಗೊಂಡಿದ್ದೇವೆ. ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರಲಿದೆ. ಹಾಗಾಗಿ 5 ವರ್ಷದ ಒಳಗೆ ಶಾಲೆಗೆ ಹೋಗುವ ಮಕ್ಕಳಿಗೆ ಒಂದು ತಿಂಗಳು ರಜೆ ಕೊಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಬಗ್ಗೆ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಹೊರಡಿಸಲಾಗುತ್ತಿದೆ ಎಂದರು.