ಪುನೀತ್ ರಾಜ್ಕುಮಾರ್ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಗಣ್ಯಾತಿಗಣ್ಯರು! - ಗಾಯಕ ರಾಜೇಶ್ ಕೃಷ್ಣನ್
ನಟ ಸಾರ್ವಭೌಮ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಯಿಂದ ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗಣ್ಯಾತಿಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ನಿರ್ದೇಶಕ ಟಿ.ಎನ್.ಸೀತಾರಾಮ್, ಗಾಯಕ ರಾಜೇಶ್ ಕೃಷ್ಣನ್, ನಟ ಚೇತನ್, ಡಿಂಗ್ರಿ ನಾಗರಾಜ್ ಸೇರಿ ಹಲವರು ಅಂತಿಮ ದರ್ಶನ ಪಡೆದು ಭಾವುಕರಾದರು.