ಹೊನ್ನ ಚರಿತೆಯ ನಾಡಲ್ಲಿ ವಿಜೃಂಭಣೆಯ ದೀಪೋತ್ಸವ: ಹಂಪಿ ವಿರೂಪಾಕ್ಷನಿಗೆ ಕಾರ್ತಿಕ ಮಾಸದ ವಿಶೇಷ ಪೂಜೆ - ಹಂಪಿ ವಿರೂಪಾಕ್ಷ ದೇವಾಲಯ ಕಾರ್ತಿಕ ಮಾಸ ಪೂಜೆ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ಕಾರ್ತಿಕ ಮಾಸದ ಕಡೇ ಸೋಮವಾರದಂದು ವಿರೂಪಾಕ್ಷೇಶ್ವರ ದೇವಸ್ಥಾನದ ಆವರಣದಲ್ಲಿ ದೀಪೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಇಂದು ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯರು ಪುಷ್ಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದರು. ದೇವಸ್ಥಾನದ ಆವರಣದಲ್ಲಿ ನೂರಾರು ದೀಪಗಳನ್ನು ಬೆಳಗಿಸಿದ ಭಕ್ತರು ತುಂಗಾ ಸ್ನಾನ ಮಾಡಿ ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದು ಪುನೀತರಾದರು.