ಚಾಮರಾಜೇಂದ್ರ ಮೃಗಾಲಯಕ್ಕೆ ಸಚಿವರ ಭೇಟಿ, ಪರಿಶೀಲನೆ - ಚಾಮರಾಜೇಂದ್ರ ಮೃಗಾಲಯಕ್ಕೆ ಎಸ್.ಟಿ ಸೋಮಶೇಖರ್ ಭೇಟಿ
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಯಾವ ರೀತಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪರಿಶೀಲಿಸಲು ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊರೊನಾ ಹಿನ್ನೆಲೆಯಲ್ಲಿ ಮೃಗಾಲಯದಲ್ಲಿರುವ ಪ್ರಾಣಿ, ಪಕ್ಷಿಗಳಿಗೆ ಯಾವ ರೀತಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಲ್ಲಿ ಆಹಾರ, ಕುಡಿಯುವ ನೀರಿಗೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಮೃಗಾಲಯದ ಅಧಿಕಾರಿಗಳಿಂದ ಮಾಹಿತಿ ಪಡೆದರು.