ಕೊರೊನಾ ಬಗ್ಗೆ ಜನ ಜಾಗೃತಿ ಮೂಡಿಸುತ್ತಿರುವ ಜಮೀರ್ ಅಹ್ಮದ್ ಖಾನ್..
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಇಂದೂ ಕೂಡ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೊನಾ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯ ಮುಂದುವರಿಸಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಜಾಗೃತಿ ನಡೆಸಿದ ಅವರು ಕೊರೊನಾ ಹರಡದಂತೆ ಡ್ರೋನ್ ಮೂಲಕ ರಾಸಾಯನಿಕ ಸಿಂಪರಣೆ ಮಾಡುವ ಕಾರ್ಯವನ್ನು ಸಹ ವೀಕ್ಷಿಸಿದರು. ಅಲ್ಲದೇ ಕ್ಷೇತ್ರವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗೆ ಊಟೋಪಚಾರದ ವ್ಯವಸ್ಥೆ ಕೂಡ ಮಾಡಿದ್ದಾರೆ.