‘ಪಾದರಾಯ’ ಚಿತ್ರಕ್ಕಾಗಿ 42 ದಿನಗಳ ಕಟ್ಟುನಿಟ್ಟಿನ ವ್ರತ ಮಾಡುತ್ತಿರುವ ನಾಗಶೇಖರ್! - Nagasekhar strict vrata
ಜಾಕ್ ಮಂಜು ನಿರ್ಮಾಣದ ಚಕ್ರವರ್ತಿ ಚಂದ್ರಚೂಡ್ ಹಾಗೂ ನಾಗಶೇಖರ್ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ‘ಪಾದರಾಯ’ ಗಮನ ಸೆಳೆಯುತ್ತಿದೆ. ಟೈಟಲ್ ಮತ್ತು ಟೀಸರ್ ಮೂಲಕ ಈಗಾಗಲೇ ಸಂಚಲನ ಸೃಷ್ಟಿಸಿದೆ. ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೀಗ ಲೇಟೆಸ್ಟ್ ಅಪ್ಡೇಟ್ ನೀಡಿದೆ. ಚಕ್ರವರ್ತಿ ಚಂದ್ರಚೂಡ್ ಅವರಿಂದ ಹನುಮಮಾಲೆ ಹಾಕಿಸಿಕೊಂಡಿರುವ ಚಿತ್ರದ ನಾಯಕ ನಟ ನಾಗಶೇಖರ್, ಇಂದಿನಿಂದ 42 ದಿನಗಳ ಕಟ್ಟುನಿಟ್ಟಿನ ವ್ರತ ಆಚರಣೆ ಮಾಡಲು ಮುಂದಾಗಿದ್ದಾರೆ. 42 ದಿನಗಳ ಕಾಲ ಅವರು ಅಂಜನಾದ್ರಿ ಬೆಟ್ಟದಲ್ಲಿಯೇ ವ್ರತ ಆಚರಿಸಲಿದ್ದಾರಂತೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ ಆಗಿದ್ದರಿಂದ ಕುತೂಹಲ ತರಿಸುತ್ತಿದೆ. ಅಂಜನಾದ್ರಿ ಬೆಟ್ಟದ ಸುತ್ತಮುತ್ತಲ್ಲಿ ಈ ಚಿತ್ರದ ಕಥೆ ನಡೆಯಲಿದ್ದು, ಸದ್ಯದಲ್ಲೇ ಚಿತ್ರದ ನಾಯಕಿ ಹಾಗೂ ಚಿತ್ರದ ತಾರಾಬಳಗದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದು, ಸತ್ಯ ಹೆಗಡೆ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
Last Updated : Feb 3, 2023, 8:38 PM IST