ಮಂಗಳೂರು: ಉಚ್ಚಿಲ ಸಮುದ್ರ ತೀರದಲ್ಲಿ ಮುಳುಗಿದ ಚೀನಾದ ನೌಕೆಯಿಂದ ತೈಲ ತೆರವು ಕಾರ್ಯ ಆರಂಭ - ವ್ಯಾಕ್ಯೂಂ ಪಂಪ್ ಮೂಲಕ ತೈಲವನ್ನು ಹೊರಕ್ಕೆಳೆಯುವ ಕಾರ್ಯ
ಮಂಗಳೂರು: ನಗರದ ಉಚ್ಚಿಲ ಸಮುದ್ರ ತೀರದಲ್ಲಿ ಮುಳುಗಡೆಯಾದ ಚೀನಾದ ಹಡಗಿನಿಂದ ಆರು ತಿಂಗಳ ಬಳಿಕ ತೈಲ ತೆರವು ಕಾರ್ಯ ಆರಂಭವಾಗಿದೆ. ಚೀನಾದಿಂದ ಲೆಬನಾನ್‌ಗೆ ಎಂಟು ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಪ್ರಿನ್ಸೆಸ್ ಮಿರಾಲ್ ಹಡಗು 2022ರ ಜೂನ್ 21ರಂದು ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಡೆಯಾಗಿತ್ತು. ಈ ಹಡಗಿನಲ್ಲಿ 160 ಟನ್ ಫರ್ನೆಸ್ ಆಯಿಲ್, 60 ಟನ್ ಡೀಸೆಲ್ ಸೇರಿದಂತೆ 220 ಟನ್ ತೈಲ ಹೊಂದಿದೆ.
ಸದ್ಯ ಗುಜರಾತ್ ಮೂಲದ ಬನ್ಸಲ್ ಎಂಡೆವರ್ಸ್ ಸಂಸ್ಥೆಗೆ ತೈಲ ತೆರವು ಗುತ್ತಿಗೆಯನ್ನು ನೀಡಲಾಗಿದೆ. ಹೋಸ ಪೈಪ್ ಅಳವಡಿಕೆ ಮಾಡಿ ವ್ಯಾಕ್ಯೂಂ ಪಂಪ್ ಮೂಲಕ ತೈಲವನ್ನು ಹೊರಕ್ಕೆಳೆಯುವ ಕಾರ್ಯ ಪ್ರಾರಂಭವಾಗಿದೆ. 320 ಟನ್ ಸಾಮರ್ಥ್ಯದ ಬಂಕರ್ ಬಾರ್ಜ್ ಮೂಲಕ ತೈಲವನ್ನು ಪೂರ್ಣ ವರ್ಗಾಯಿಸಿ ಹಳೆ ಬಂದರಿಗೆ ತರಲಾಗುತ್ತಿದೆ.