ರಾಜ್ಯ ಬಜೆಟ್ನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಅನುದಾನ: ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಂತಸ - Fumd For Film City
ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 500 ಕೋಟಿ ರೂ. ಮೀಸಲಿಟ್ಟಿದ್ದಾರೆ. ಇದನ್ನು ಇಡೀ ಉದ್ಯಮ ಸ್ವಾಗತಿಸುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಈಟಿವಿ ಭಾರತದ ಜೊತೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ನಿರ್ಧರಿಸಿರುವ ಸರ್ಕಾರದ ಕ್ರಮ ಸಂತಸ ತಂದಿದೆ ಎಂದಿದ್ದಾರೆ.