ಅಮೆರಿಕದಲ್ಲಿ ಮತ್ತೆ ಗುಂಡಿನ ಮೊರೆತ... ಚರ್ಚ್ ಒಳನುಗ್ಗಿದ ಬಂದೂಕುಧಾರಿ: ಇಬ್ಬರ ಹತ್ಯೆ - 2 dead in Texas church attack,
ಅಮೆರಿಕದ ಟೆಕ್ಸಾಸ್ನ ಚರ್ಚ್ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಇಬ್ಬರನ್ನು ಬಲಿ ಪಡೆದಿದ್ದಾನೆ. ಚರ್ಚ್ನಲ್ಲಿ ಪ್ರಾರ್ಥನೆ ನಡೆಯುವ ವೇಳೆ ಬಂದೂಕು ಹಿಡಿದು ಒಳ ನುಗ್ಗಿದ ದುಷ್ಕರ್ಮಿ ಮೂವರ ಮೇಲೆ ಗುಂಡು ಹಾರಿಸಿದ್ದಾನೆ. ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಆರೋಪಿಯನ್ನು ಭದ್ರತಾ ಪಡೆ ಗುಂಡಿಟ್ಟು ಕೊಂದಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಆರೋಪಿ ಗುಂಡಿನ ದಾಳಿ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಭಯ ಭೀತರಾಗಿದ್ದಾರೆ.