ಮತ ಚಲಾವಣೆ ಮಾಡಿ ಬರುತ್ತಿದ್ದ ಯುವಕನ ಮೇಲೆ ಹಲ್ಲೆ - ಶಂಭುಲಿಂಗ
ಮತ ಚಲಾಯಿಸಿ ಬರ್ತಿದ್ದ ಯುವಕನ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದ ವಿಡಿಯೋ ಇದೀಗ ವೈರಲ್ ಆಗಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹೆರೂರು ಗ್ರಾಮದಲ್ಲಿ ಘಟನೆ ನಡೆದಿತ್ತು ಶಂಭುಲಿಂಗ (24) ಹೆಗ್ಗಣ್ಣವರ ಮೇಲೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಹಾದೇವಪ್ಪ ಬಾಗಸರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನುವ ಅರೋಪ ಕೇಳಿಬಂದಿದೆ. ಹಲ್ಲೆಗೆ ಒಳಗಾದ ಶಂಭುಲಿಂಗನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಹನ್ನೆರಡು ಜನರ ವಿರುದ್ಧ ದೂರು ದಾಖಲಾಗಿದೆ.